ಟ್ರಕ್‌ಗೆ ಬಸ್ ಡಿಕ್ಕಿ- 7 ಮಂದಿ ಸಾವು…

60
firstsuddi

ಅಯೋಧ್ಯೆ: ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿರುವ ಘಟನೆ ನಿನ್ನೆ ಉತ್ತರ ಪ್ರದೇಶದ ಅಯೋಧ್ಯೆ ಬಳಿ ಲಕ್ನೋ–ಗೋರಖಪುರ ಹೆದ್ದಾರಿಯಲ್ಲಿ ನಡೆದಿದೆ.

ಅಯೋಧ್ಯೆಯಿಂದ ಬರುತ್ತಿದ್ದ ಖಾಸಗಿ ಬಸ್ ಅಂಬೇಡ್ಕರ್‌ ನಗರದ ಕಡೆಗೆ ತೆರಳಲು ಹೆದ್ದಾರಿಯಲ್ಲಿ ತಿರುವು ತೆಗೆದುಕೊಳ್ಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರಕ್‍ಗೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿದೆ.

ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಿ ಬಸ್ ಮತ್ತು ಟ್ರಕ್ ಅಡಿ ಸಿಲುಕ್ಕಿದ್ದವರ ರಕ್ಷಣೆ ಮಾಡಲಾಗಿದೆ ಎಂದು ಅಯೋಧ್ಯೆಯ ಮುಖ್ಯ ವೈದ್ಯಾಧಿಕಾರಿ ಡಾ. ಅಜಯ್ ರಾಜಾ ಅವರು ತಿಳಿಸಿದ್ದಾರೆ.

ಗಾಯಗೊಂಡವರನ್ನು ಉಪಚರಿಸಲು 12ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಕುಮಾರ್ ಹೇಳಿದ್ದಾರೆ.