ಟ್ರಾಫಿಕ್ ರೂಲ್ಸ್ ಉಲ್ಲಂಘನೆ ದಂಡಕ್ಕೆ ಶೇ.50 ರಿಯಾಯಿತಿ ; 15 ದಿನ ಅವಧಿ ವಿಸ್ತರಣೆ…

60
firstsuddi

ಬೆಂಗಳೂರು : ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ದಂಡ ಪಾವತಿಸಲು ನೀಡಿದ್ದ ಶೇ.50 ರಿಯಾಯಿತಿ ಸೌಲಭ್ಯದ ಅವಧಿಯನ್ನು ಮತ್ತೆ ವಿಸ್ತರಿಸಲಾಗಿದೆ.

ರಿಯಾಯಿತಿ ಸೌಲಭ್ಯದಿಂದಾಗಿ ದಂಡ ಪಾವತಿಸುವವರ ಸಂಖ್ಯೆ ಹೆಚ್ಚಾಗಿದೆ. ಜನರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಾಗಿ ರಿಯಾಯಿತಿ ಸೌಲಭ್ಯದ ದಿನಾಂಕ ವಿಸ್ತರಣೆ ಮಾಡಲು ಪರಿಶೀಲಿಸಿ ಎಂದು ಸಂಚಾರ ಪೊಲೀಸರು, ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಕೋರಿಕೆ ಸಲ್ಲಿಸಿದ್ದರು. ಕೋರಿಕೆ ಮೇರೆಗೆ ಸಭೆ ನಡೆಸಿ, ಶೇ.50 ರಿಯಾಯಿತಿ ಸೌಲಭ್ಯದ ಅವಧಿ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಶೇ 50ರಷ್ಟು ದಂಡ ಪಾವತಿಗೆ ಮಾರ್ಚ್ 4ರಿಂದ 15 ದಿನಗಳ ಕಾಲಾವಕಾಶ ನೀಡಲಾಗಿದೆ.

ಈ ಹಿಂದೆ ಫೆಬ್ರವರಿ 11ರ ವರೆಗೆ 15 ದಿನಗಳ ಕಾಲ ಶೇ.50ರ ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ನೀಡಿದ್ದಾಗ ಸವಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಕೋಟ್ಯಂತರ ರೂಪಾಯಿ ದಂಡ ಸಂಗ್ರಹವಾಗಿತ್ತು. ಆನ್ ಲೈನ್, ಆಫ್ ಲೈನ್ ಮೂಲಕ ಜನ ದಂಡ ಪಾವತಿಸಿದ್ದರು.