ಟ್ರ್ಯಾಕ್ಟರ್ ಹಾಗೂ ಕಾರು ನಡುವೆ ಡಿಕ್ಕಿ- 7 ಮಂದಿ ಸ್ಥಳದಲ್ಲೇ ಸಾವು…

48
firstsuddi

ಬಿಹಾರ: ರಾಜ್ಯದ ಖಗಾರಿಯಾ ಎಂಬಲ್ಲಿನ ಪಸ್ರಾಹ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಟ್ಟು 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚೌತಮ್ ಬ್ಲಾಕ್ ಪ್ರದೇಶದಲ್ಲಿ ಮದುವೆ ಮುಗಿಸಿ ಸಂಬಂಧಿಕರು ಕಾರಿನಲ್ಲಿ ಹಿಂದಿರುಗುತ್ತಿದ್ದರು. ಎನ್ಎಚ್ 31ರ ವಿದ್ಯಾರತನ್ ಪೆಟ್ರೋಲ್ ಪಂಪ್ ಸಮೀಪ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಕಾರು ರಸ್ತೆ ಬದಿಗೆ ಉರುಳಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತರಲ್ಲಿ ಮೂವರು ಮಕ್ಕಳಿದ್ದಾರೆ ಎಂದು ಗೋಗ್ರಿಯ ಡಿಎಸ್​ಪಿ ರಮೇಶ್ ಕುಮಾರ್ ತಿಳಿಸಿದ್ದಾರೆ.