ಬೆಂಗಳೂರು : ಕಾದಂಬರಿಕಾರ, ನಾಟಕಕಾರ, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿ ಡಾ.ಚಂದ್ರಶೇಖರ ಕಂಬಾರ ಹೆಸರಿನಲ್ಲಿ ವಂಚನೆಗೆ ಯತ್ನ ನಡೆಸಿರುವ ವಿಚಾರ ಬೆಳಕಿಗೆ ಬಂದಿದ್ದು, ಈ ಸಂಬಂಧ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್ ಅಪರಾಧ ವಿಭಾಗಕ್ಕೆ ಚಂದ್ರಶೇಖರ ಕಂಬಾರ ದೂರು ನೀಡಿದ್ದಾರೆ.
ನನ್ನ ಹೆಸರಿನಲ್ಲಿ ಬೇರೆ ಬೇರೆ ವ್ಯಕ್ತಿಗಳಿಗೆ ವಾಟ್ಸ್ ಆ್ಯಪ್ ಸಂದೇಶ ಕಳಿಸುತ್ತಿರುವ ಕಿಡಿಗೇಡಿಗಳು, ಧನ ಸಹಾಯ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಆದ್ದರಿಂದ, ಈ ಕುರಿತು ಕ್ರಮ ಕೈಗೊಳ್ಳುವಂತೆ ಕಂಬಾರರು ದೂರಿನಲ್ಲಿ ತಿಳಿಸಿದ್ದಾರೆ.










