ಡಾ.ಪುನೀತ್ ರಾಜ್‍ಕುಮಾರ್ ಅವರಿಗೆ ‘ಸಹಕಾರ ರತ್ನ’ ಪ್ರಶಸ್ತಿ.

67
firstsuddi

ಬೆಂಗಳೂರು : ನಿನ್ನೆ ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯವು ಮರಣೋತ್ತರ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. ಇದೀಗ ಸಹಕಾರ ಇಲಾಖೆ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷರಾದ ಜಿ.ಟಿ.ದೇವೇಗೌಡ ಅವರು ಡಾ.ಪುನೀತ್ ರಾಜ್‍ಕುಮಾರ್ ಅವರಿಗೆ `ಸಹಕಾರ ರತ್ನ’ (ಮರಣೋತ್ತರ) ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇಂದು ನಗರದ ಸದಾಶಿವನಗರದಲ್ಲಿನ ಪುನೀತ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಜಿ.ಟಿ.ದೇವೇಗೌಡ ಅವರು ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಗೆ ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಿದರು. ಪ್ರಶಸ್ತಿಯು 15 ಗ್ರಾಂ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.

ಈ ಸಂದರ್ಭದಲ್ಲಿ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಅರುಣ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.