ಡಿ.ಕೆ ಶಿವಕುಮಾರ್ ಅವರಿಗೆ ದೆಹಲಿ ಉಚ್ಚ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸಂತೋಷದ ವಿಚಾರ : ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್…

315
firstsuddi

ಬೆಂಗಳೂರು : ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿಯ ಹೈ ಕೋರ್ಟ್ ಜಾಮೀನು ನೀಡಿರುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. “ಡಿ.ಕೆ ಶಿವಕುಮಾರ್ ಅವರಿಗೆ ದೆಹಲಿ ಉಚ್ಚ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸಂತೋಷದ ವಿಚಾರ. ಸೋಮವಾರ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಅವರಿಗೆ ಧೈರ್ಯ ತುಂಬಿ ಜಾಮೀನು ಸಿಗುವ ಆಶಯವನ್ನು ವ್ಯಕ್ತಪಡಿಸಿದ್ದೆ” ಎಂದು ಟ್ವೀಟ್ ಮಾಡಿದ್ದಾರೆ.