ಮೈಸೂರು : ರಮೇಶ್ ಜಾರಕಿಹೊಳಿ ಅವರ ಸಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಕರಣವನ್ನು ಎಲ್ಲರೂ ಹುಡುಕಾಟಿಕೆಯಾಗಿ ತೆಗೆದುಕೊಂಡಿದ್ದಾರೆ. ಯಾರಿಗೂ ಗಂಭೀರತೆ ಇಲ್ಲ. ಇದರಿಂದ ರಾಜ್ಯದ ಗೌರವ ಹಾಳಾಗುತ್ತಿದೆ. ಅಧಿಕಾರಿಗಳು ಯಾವುದೇ ಪ್ರಭಾವಕ್ಕೆ ಒಳಗಾಗಬಾರದು ಎಂದು ಒತ್ತಾಯಿಸಿದರು.
ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದಿದ್ದ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಡಿಕೆಶಿ ಅವರಿಗೆ ಇರುವ ಅನುಭವ ನಮಗೂ ಇಲ್ಲ. ನಿನ್ನೆ ದುಡುಕಿ ಅವರ ಹೆಸರನ್ನು ಅವರೇ ಹೇಳಿದ್ದಾರೆ. ಯಾಕೆ ಈ ಪ್ರಕರಣದಲ್ಲಿ ದುಡುಕಿ ತಮ್ಮ ಹೆಸರನ್ನು ತಾವೇ ಏಕೆ ಸಿಲುಕಿಸಿಕೊಂಡರೋ ಗೊತ್ತಿಲ್ಲ. ಯಾರು ಹೇಳಿದ್ದಾರೆ ಅವರ ಹೆಸರನ್ನ, ರಮೇಶ್ ಜಾರಕಿಹೊಳಿ ಹೇಳಿದ್ದಾರಾ..? ಆದರೂ ಅವರೇ ಯಾಕೆ ಅವರ ಹೆಸರನ್ನ ಹೇಳ್ತಿದ್ದಾರೆ ಅನ್ನೋದು ಗೊತ್ತಿಲ್ಲ ಎಂದರು.
ಇನ್ನು ಇದೇ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮೈಸೂರು ಹಾಲು ಒಕ್ಕೂಟದ ಚುನಾವಣೆ ವಿಚಾರವಾಗಿ ಮಾತನಾಡಿದ್ದಾರೆ. ಶಾಸಕ ಜಿ.ಟಿ. ದೇವೇಗೌಡರು ದುರಂಹಕಾರದಲ್ಲಿ ಮಾತನಾಡಿದ್ದಾರೆ. ಜಿ.ಟಿ.ದೇವೇಗೌಡರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಲ್ಲ. ಈ ವಿಚಾರದಲ್ಲಿ ದೇವೇಗೌಡರ ಮನವೊಲಿಸುತ್ತೀನಿ ಎಂದರು.










