ಡಿ.ಕೆ.ಶಿವಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ – ಪ್ರಶಾಂತ್ ಸಂಬರಗಿ ವಿರುದ್ಧ ಎಫ್‍ಐಆರ್…

86
firstsuddi

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಹೋದರ ಡಿ.ಕೆ. ಸುರೇಶ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕೋಮುಭಾವನೆ ಕೆರಳಿಸುವ ಪೋಸ್ಟ್ ಹಾಕಿರುವ ಆರೋಪ ಕೇಳಿಬಂದಿದ್ದು, ಪ್ರಶಾಂತ್ ಸಂಬರಗಿ ವಿರುದ್ಧ ನಾರಾಯಣ್ ಸ್ವಾಮಿ ಸೌತ್ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.