ಬೆಂಗಳೂರು : ಡಿ.ಕೆ.ಶಿವಕುಮಾರ್ ಅವರ ಬಂಧನದ ಹಿನ್ನೆಲೆ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಪ್ರತಿಕ್ರಯಿಸಿದ್ದಾರೆ. ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ ಏಜೆನ್ಸಿಗಳನ್ನು ಅಕ್ರಮವಾಗಿ ಬಳಸುತ್ತಿರುವುದು ದೃಢಪಟ್ಟಿದೆ.ಹಬ್ಬದ ಆಚರಣೆಗೂ ಅವಕಾಶ ನೀಡದೆ 4ದಿನಗಳ ಕಾಲ ನಿರಂತರ ವಿಚಾರಣೆಗೆ ಒಳಪಟ್ಟ ಡಿ.ಕೆ. ಶಿವಕುಮಾರ್ ಅವರನ್ನು ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪದ ಮೇಲೆ ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಟ್ವೀಟ್ ಮಾಡಿದ್ದಾರೆ.











