ಡಿಆರ್‌ಡಿಒ ಯುವ ವಿಜ್ಞಾನಿ ಆತ್ಮಹತ್ಯೆ…

62
firstsuddi

ಮಂಗಳೂರು: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹೈದರಾಬಾದ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವ ವಿಜ್ಞಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಎಂಬಲ್ಲಿ ನಡೆದಿದೆ.

ಕಲ್ಲರ್ಪೆ ನಿವಾಸಿ ಭರತ್ ಕಲ್ಲರ್ಪೆ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಭರತ್ ಅವರು ಹೈದರಾಬಾದ್‌ನ ಡಿಆರ್‌ಡಿಒ ಸಂಸ್ಥೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ವಿಜ್ಞಾನಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಎರಡು ತಿಂಗಳ ಹಿಂದೆಯಷ್ಟೇ ಅವರು ಈ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದರು.

ಕಳೆದ ಒಂದು ವಾರದ ಹಿಂದೆ ಊರಿಗೆ ಬಂದಿದ್ದ. ಸಂಸ್ಥೆಗೆ ರಾಜೀನಾಮೆ ಪತ್ರ ನೀಡಿದ್ದರೂ ರಾಜೀನಾಮೆ ಸ್ವೀಕಾರ ಮಾಡಿರಲಿಲ್ಲ. ನಿನ್ನೆ ರಾತ್ರಿ ಕೆಲಸ ನಿರ್ವಹಿಸುತ್ತಿದ್ದ ಸಂಸ್ಥೆಯ ಕಚೇರಿಯಿಂದ ಫೋನ್ ಬಂದಿತ್ತು. ಆ ಬಳಿಕ ಇಂದು ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.