ಡಿಕೆ ಶಿವಕುಮಾರ್‌ಗೆ ಐಟಿ ಶಾಕ್ ; ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ…

79
firstsuddi

ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಇಲಾಖೆ (ಐಟಿ) ದಾಖಲಿಸಿದ್ದ ಪ್ರಕರಣವನ್ನು ರದ್ದು ಮಾಡಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

2018 ರಲ್ಲಿ ಬಿಡದಿಯ ಈಗಲ್ಟನ್ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದ ಐಟಿ ಪ್ರಕರಣ ದಾಖಲಿಸಿತ್ತು. ಬರೀ ಹಣಕಾಸು ವ್ಯವಹಾರಗಳು ನಡೆದಿದ್ದರೆ ಕೇಸ್ ದಾಖಲಿಸಲು ಸಾಧ್ಯವಿಲ್ಲ. ಲೆಕ್ಕವಿಲ್ಲದ ವಹಿವಾಟುಗಳು ನಡೆದಿದ್ದರೂ ತೆರಿಗೆ ಅಥವಾ ದಂಡದ ಪಾವತಿಗೆ ಆರೋಪಿ ಹೊಣೆಗಾರರಾಗಿದ್ದಾರೆ ಎಂಬುದನ್ನು ನಿರ್ಧರಿಸುವವರೆಗೆ ಯಾವುದೇ ಕಾನೂನು ಕ್ರಮವನ್ನು ಆರಂಭಿಸುವಂತಿಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧದ  ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಐಟಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಡಿಕೆ ಶಿವಕುಮಾರ್ ಗೆ ಪ್ರತಿಕ್ರಿಯೆ ನೀಡುವಂತೆ ಕೋರಿ ನೋಟಿಸ್ ಜಾರಿ ಮಾಡಲಾಗಿದೆ. ಇತ್ತ ಐಟಿಗೆ ನಾಲ್ಕು ವಾರದ ಒಳಗಡೆ ಹೊಸ ಅರ್ಜಿ ಸಲ್ಲಿಕೆ ಮಾಡುವಂತೆ ಸೂಚಿಸಿದೆ.