ಡಿಕೆಶಿ ಅವರ ಜಾಮೀನು ಅರ್ಜಿ ವಿಚಾರಣೆ ಅ.14ಕ್ಕೆ ಮುಂದೂಡಿಕೆ…

218
firstsuddi

ನವದೆಹಲಿ : ಅಕ್ರಮ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಅ.14ಕ್ಕೆ ಮುಂದೂಡಿಕೆ ಮಾಡಿದೆ. ಇಡಿ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಡಿಕೆಶಿ ಪರ ವಕೀಲರು ದೆಹಲಿಯ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾ. ಸುರೇಶ್ ಕುಮಾರ್ ನೇತೃತ್ವದ ಏಕ ಸದಸ್ಯ ಪೀಠ ವಿಚಾರಣೆಯನ್ನು ಅ. 14ಕ್ಕೆ ಮುಂದೂಡಿದ್ದು, ಇನ್ನೂ 14ದಿನ ಡಿ.ಕೆ. ಶಿವಕುಮಾರ್ ಅವರಿಗೆ ತಿಹಾರ್ ಜೈಲೇ ಗತಿಯಾಗಿದೆ.