ಡಿಲೀಟ್ ಆಯ್ತು ‘ಕಾಂತಾರ’ ಸಿನಿಮಾದ ವರಾಹ ರೂಪಂ ಹಾಡು…

87
firstsuddi

‘ಕಾಂತಾರ’ ಸಿನಿಮಾದ ‘ವರಾಹ ರೂಪಂ..’ ಹಾಡು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ನಮ್ಮ ಹಾಡನ್ನು ಕಾಪಿ ಮಾಡಲಾಗಿದೆ ಎಂದು ಮಲಯಾಳಂ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್ ಕಂಪನಿಯು ಹೇಳಿತ್ತು. ಈ ಸಂಬಂಧ ಕೇಸ್ ಕೂಡ ದಾಖಲು ಮಾಡಿತ್ತು. ಈಗ ‘ಹೊಂಬಾಳೆ ಫಿಲ್ಮ್ಸ್’ ಯೂಟ್ಯೂಬ್ ಚಾನೆಲ್​ನಿಂದ ಈ ಹಾಡನ್ನು ಡಿಲೀಟ್ ಮಾಡಲಾಗಿದೆ.

ವರಾಹ ರೂಪಂ ಮತ್ತು ನವರಸಂ ಹಾಡುಗಳ ನಡುವೆ ಇರುವ ಸಾಮ್ಯತೆಯು ಕಾಪಿರೈಟ್ ಕಾನೂನಿನ ಸ್ಪಷ್ಟ ಉಲ್ಲಂಘನೆ ಎಂದು ತೈಕ್ಕುಡಂ ಬ್ರಿಡ್ಜ್ ಹೇಳಿತ್ತು. ಅಲ್ಲದೆ, ಈ ಸಂಬಂಧ ಕೋರ್ಟ್ ನಲ್ಲಿ ‘ವರಾಹ ರೂಪಂ..’ ಹಾಡಿನ ಮೇಲೆ ನಿರ್ಬಂಧ ಹೇರುವಂತೆ ಮನವಿ ಸಲ್ಲಿಕೆ ಮಾಡಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಕೇರಳದ ಕೋಯಿಕ್ಕೋಡ್ ನ ಕೋರ್ಟ್, ಸಿನಿಮಾದಲ್ಲಿ ಈ ಹಾಡು ಬಳಸದಂತೆ ತಡೆಯಾಜ್ಞೆ ನೀಡಿತ್ತು.

ಕಾಂತಾರ ಸಿನಿಮಾದಲ್ಲಿ ಕ್ಲೈಮ್ಯಾಕ್ಸ್ ನಲ್ಲಿ ಬರುವ ವರಾಹ ರೂಪಂ ಹಾಡನ್ನು ನಾವು ಕದ್ದಿಲ್ಲ. ಸುಖಾಸುಮ್ಮನೆ ಜನರನ್ನು ಹಾದಿ ತಪ್ಪಿಸುವ ಕೆಲಸ ನಡೆಯುತ್ತಿದೆ ಎಂದು ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರು. ಆದರೆ, ಹಾಡನ್ನೇ ಹೊಂಬಾಳೆ ಸಂಸ್ಥೆ ತಗೆದುಹಾಕಿದೆ.