ಡಿವೈಡರ್‌ಗೆ ಕಾರು ಡಿಕ್ಕಿ– ಇಬ್ಬರು ಸ್ಥಳದಲ್ಲೇ ಸಾವು…

76
firstsuddi

ಧಾರವಾಡ: ರಸ್ತೆ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ತೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಮೃತರನ್ನು ವಿನಯ್ ಹಿರೇಮಠ (24) ಹಾಗೂ ಸಂದೀಪ್ (29) ಎಂದು ಗುರುತಿಸಲಾಗಿದೆ. ಕಳೆದ ತಡರಾತ್ರಿ ಧಾರವಾಡದಿಂದ ಊಟಕ್ಕೆ ಹೋಗಿದ್ದ ಯುವಕರು ತಮ್ಮ ಕಾರಿನಲ್ಲಿ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇದರಿಂದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವ ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರಿಳೆದಿದ್ದಾರೆ.

ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.