ಡಿವೈಡರ್​ಗೆ ಗುದ್ದಿದ ಬೈಕ್- ಇಬ್ಬರು ಸಾವು…

36
firstsuddi

ಉಳ್ಳಾಲ: ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮೃತರನ್ನು ಬೋಂದೇಲ್​ನ ದೀಕ್ಷಿತ್ ಎಂಬವರ ಪತ್ನಿ ನಿಧಿ (29) ಹಾಗೂ ಬೈಕ್ ಸವಾರ ಯತೀಶ್ ದೇವಾಡಿಗ ಎಂದು ಗುರುತಿಸಲಾಗಿದೆ. ಇಬ್ಬರು ಮುಡಿಪುವಿನಲ್ಲಿ ನಿನ್ನೆ ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸಾಗುವ ಸಂದರ್ಭ ಈ ದುರ್ಘಟನೆ ನಡೆದಿದೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್​ಗೆ ಡಿಕ್ಕಿ ಹೊಡೆದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿಧಿ ಅವರು ನಿನ್ನೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಯತೀಶ್ ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಈ ಸಂಬಂಧ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.