ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸಾವು…

70
firstsuddi

ಚಿತ್ರದುರ್ಗ : ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಚಿಕ್ಕಬೆನ್ನೂರು ಬಳಿ ನಡೆದಿದೆ.

ಮಹಾರಾಷ್ಟ್ರ ಮೂಲದ ಮಾನ್ಸಿ (40) ಹಾಗೂ ಉಜ್ವಲ್ ಬಾರ್ವಿ (44) ಮೃತ ದುರ್ದೈವಿಗಳು. ಘಟನೆಯಲ್ಲಿ ಗಾಯಾಳು ಸಚ್ಚಿನ್ ಬಾರ್ವಿ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ತಿರುಪತಿ ದರ್ಶನ ಮುಗಿಸಿ ವಾಪಸ್ ಮಹಾರಾಷ್ಟ್ರಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ. ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಕಾರು ಡಿಕ್ಕಿಯಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.