ತುಮಕೂರು : ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನೆಲಹಾಳ್ ಬಳಿ ನಡೆದಿದೆ. ಮೂವರು ಬೈಕಿನಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಘಟನೆ ಕೋರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.










