ಡಿಸೆಂಬರ್ ವೇಳೆಗೆ ದೇಶದ ಪ್ರತಿಯೊಬ್ಬ ನಾಗರಿಕರಿಗೂ ಲಸಿಕೆ ಸಿಗಲಿದೆ : ಜೆ.ಪಿ ನಡ್ಡಾ.

130
firstsuddi

ನವದೆಹಲಿ : ಡಿಸೆಂಬರ್ ವೇಳೆಗೆ ದೇಶದ ಪ್ರತಿಯೊಬ್ಬ ನಾಗರಿಕರಿಗೂ ಲಸಿಕೆ ಸಿಗಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ತಿಳಿಸಿದ್ದಾರೆ.

ರಾಜಸ್ಥಾನದ ಕೋವಿಡ್ ಪರಿಸ್ಥಿತಿ ಕುರಿತು ಪಕ್ಷದ ಸಂಸದರೊಂದಿಗೆ ವರ್ಚುವಲ್ ಸಭೆ ನಡೆಸಿ ಬಳಿಕ ಮಾತನಾಡಿದ ನಡ್ಡಾ ಅವರು, ಈಗಾಗಲೇ ದೇಶದಲ್ಲಿ ಎರಡು ದೇಶೀಯ ಲಸಿಕೆಗಳನ್ನು ಕೇವಲ 9 ತಿಂಗಳಲ್ಲಿ ಅಭಿವೃದ್ಧಿಪಡಿಸಲಾಗಿದೆ. ಈವರೆಗೆ ದೇಶದ 18 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಪ್ರತಿಯೊಬ್ಬ ನಾಗರಿಕರಿಗೂ ಲಸಿಕೆ ಸಿಗಲಿದೆ ಎಂದು ಹೇಳಿದರು.

ಇನ್ನೂ ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಎಲ್ಲಾ ರಾಜ್ಯಗಳಿಗೆ ಆಮ್ಲಜನಕ ಹಾಗೂ ಔಷಧಿಗಳನ್ನು ಪೂರೈಸುತ್ತಿದೆ. ಆದರೆ ಕಾಂಗ್ರೆಸ್ ಪಕ್ಷ ಮಾತ್ರ ದೇಶದಲ್ಲಿ ಗೊಂದಲ ಹರಡಲು ಪ್ರಯತ್ನಿಸುತ್ತಿದ್ದು, ಜನರ ಆತ್ಮ ಸ್ಥೈರ್ಯವನ್ನು ನಾಶಮಾಡುವ ಕೆಲಸ ಮಾಡುತ್ತಿದೆ ಎಂದು ನಡ್ಡಾ ಅವರು ಆರೋಪ ಮಾಡಿದರು.