ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ- ಹೋಟೆಲ್‌ಗೆ ಕರೆಸಿಕೊಂಡು ಯುವತಿ ಮೇಲೆ ಇಬ್ಬರಿಂದ ಸಾಮೂಹಿಕ ಅತ್ಯಾಚಾರ…

62
firstsuddi

ನವದೆಹಲಿ: ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಯುವತಿಯೊಬ್ಬಳನ್ನು ಹೋಟೆಲ್‌ಗೆ ಕರೆಸಿಕೊಂಡು ಮತ್ತೊಬ್ಬ ಯುವಕನೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ದೆಹಲಿಯ ಸೆಕ್ಟರ್ 50 ಪ್ರದೇಶದಲ್ಲಿ ನಡೆದಿದೆ.

ಯುವತಿ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ವ್ಯಕ್ತಿ ಆಕೆಯನ್ನು ಜೂನ್ 29ರಂದು ಹೋಟೆಲ್‌ಗೆ ಬರುವಂತೆ ಹೇಳಿದ್ದಾನೆ. ಅಲ್ಲಿ ಆಕೆಗೆ ಇಬ್ಬರು ಪುರುಷರು ತಿನ್ನಲು ಆಹಾರ ನೀಡಿದ್ದು, ಅದನ್ನು ಸೇವಿಸಿದ ಬಳಿಕ ಆಕೆ ಪ್ರಜ್ಞೆ ಕಳೆದುಕೊಂಡಿದ್ದಳು. ಇದರ ಲಾಭ ಪಡೆದು ಅತ್ಯಾಚಾರವೆಸಗಿ ಕೃತ್ಯದ ವಿಡಿಯೋ ಕೂಡ ಮಾಡಿದ್ದಾರೆ. ಪ್ರಜ್ಞೆ ಬಂದ ನಂತರ ಆರೋಪಿಗಳು ಆಕೆಯ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.

ಯುವತಿ ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಬಂದು ಪೊಲೀಸರಿಗೆ ದೂರು ನೀಡಿದ್ದಾಳೆ. ಘಟನೆ ಕುರಿತು ಸೆಕ್ಟರ್ 50 ಪೊಲೀಸ್ ಠಾಣೆಯಲ್ಲಿ ಇಬ್ಬರು ಅಪರಿಚಿತ ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರದ ಆರೋಪದ ಮೇಲೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇದೀಗ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.