ಮುಂಬೈ : ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಇಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‍ಸಿಬಿ) ಮುಂದೆ ಹಾಜರಾದರು. ಅಕ್ಟೋಬರ್ 29ರಂದು ಆರ್ಯನ್ ಖಾನ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್ ಪ್ರತಿ ಶುಕ್ರವಾರ ಎನ್ ಸಿಬಿ ಮುಂದೆ ಹಾಜರಾಗಬೇಕು ಎಂದು ಆದೇಶ ನೀಡಿತ್ತು.
ನವೆಂಬರ್ 7ರಂದು ಎನ್‍ಸಿಬಿಯ ವಿಶೇಷ ತನಿಖಾ ತಂಡ (ಎಸ್ಐಟಿ) ಆರ್ಯನ್ ಖಾನ್ ಅವರನ್ನು ವಿಚಾರಣೆಗೆ ಕರೆಸಿತ್ತು. ಆದರೆ, ಜ್ವರ ಇದೆ ಎಂದು ಅವರು ಹಾಜರಾಗಿರಲಿಲ್ಲ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 3ರಂದು ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿತ್ತು.










