ಡ್ರಗ್ಸ್ ಕೇಸ್ : ಬಿಗ್ ಬಾಸ್ ಸ್ಪರ್ಧಿ ಮಸ್ತಾನ್ ಚಂದ್ರ ಅವರ ಮನೆ ಮೇಲೆ ಪೊಲೀಸ್ ದಾಳಿ…

112
Firstsuddi

ಬೆಂಗಳೂರು : ಬಿಗ್ ಬಾಸ್ ಸ್ಪರ್ಧಿ ಮಸ್ತಾನ್ ಚಂದ್ರ ಅವರಿಗೆ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ಶಾಕ್ ನೀಡಿದ್ದಾರೆ. ಸೆಲೆಬ್ರೆಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪದಡಿ ಇಂದು ಬೆಳಗ್ಗೆ ಬಾಣಸವಾಡಿ ಉಪವಿಭಾಗದ ಎಸಿಪಿ ಸಕ್ರಿ ನೇತೃತ್ವದ ತಂಡ ಸಂಜಯ್ ನಗರದಲ್ಲಿರುವ ಮಸ್ತಾನ್ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ.

ವಿದೇಶಿ ಡ್ರಗ್ಸ್ ಪೆಡ್ಲರ್ ಗಳಿಂದ ಮಸ್ತಾನ್ ಅವರು ನಿರಂತರವಾಗಿ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಎನ್ನಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಅಧರಿಸಿದ ಪೊಲೀಸರು ದಾಳಿ ನಡೆಸಿದ್ದು, ಮಸ್ತಾನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.