ಮಂಗಳೂರು : ಸ್ಯಾಂಡಲ್ ವುಡ್ ನ ನಟಿ, ಸ್ಟಾರ್ ಆ್ಯಂಕರ್ ಅನುಶ್ರೀಗೆ ಮತ್ತೆ ಕಂಟಕ ಎದುರಾಗಿದೆ.
ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ‘ರಿಯಾಲಿಟಿ ಶೋನ ಕೊರಿಯೋಗ್ರಾಫರ್ ಆಗಿದ್ದ ತರುಣ್ ಮುಖಾಂತರ ತನಗೆ ಅನುಶ್ರೀ ಪರಿಚಯವಾಗಿತ್ತು. ತರುಣ್ ರೂಮ್ ನಲ್ಲಿ ತಡರಾತ್ರಿವರೆಗೂ ಅನುಶ್ರೀಗೆ ಡ್ಯಾನ್ಸ್ ಪ್ರಾಕ್ಟೀಸ್ ಮಾಡಿಸುತ್ತಿದ್ದೆವು. ಡ್ಯಾನ್ಸ್ ಪ್ರಾಕ್ಟೀಸ್ ಗೆ ಬರುವಾಗ ಅನುಶ್ರೀ ಎಕ್ಟಸಿ ಡ್ರಗ್ಸ್ ತರುತ್ತಿದ್ದರು. ತರುಣ್, ನಾನು ಹಾಗೂ ಅನುಶ್ರೀ ಡ್ರಗ್ ಪಾರ್ಟಿ ಮಾಡುತ್ತಿದ್ದೆವು.ನಮಗೆ ಎಕ್ಸ್ಟಸಿ ಡ್ರಗ್ಸ್ ನೀಡಿ ಅನುಶ್ರೀ ಕೂಡ ಸೇವಿಸುತ್ತಿದ್ದರು. ಎಂದು ಕಿಶೋರ್ ಅಮನ್ ಶೆಟ್ಟಿ ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾರೆ. ಈ ಹಿನ್ನಲೆ ಮಂಗಳೂರು ಪೊಲೀಸರು ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಅನುಶ್ರೀ ಹೆಸರು ಉಲ್ಲೇಖ ಮಾಡಲಾಗಿದೆ. ಆರೋಪಿ ಕಿಶೋರ್ ಹೇಳಿಕೆಯಿಂದ ಪ್ರಕರಣ ಮತ್ತಷ್ಟು ಮಹತ್ವವನ್ನು ಪಡೆದುಕೊಂಡಿದೆ.










