ಡ್ರಗ್ಸ್ ಪ್ರಕರಣ : ಜಾಮೀನಿನ ಮೇಲೆ ಬಿಡುಗಡೆಯಾದ ಸಿದ್ಧಾಂತ್ ಕಪೂರ್.

72
firstsuddi

ಬೆಂಗಳೂರು : ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಸೇರಿ ಐವರನ್ನು ವಶಕ್ಕೆ ಪಡೆಯಲಾಗಿತ್ತು. ಆದರೆ ಇದೀಗ ಈ ಐವರಿಗೆ ಸ್ಟೇಷನ್ ಬೇಲ್ ನೀಡಲಾಗಿದೆ. ಆದರೆ ಇವತ್ತು ಕೂಡ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಭಾನುವಾರ ರಾತ್ರಿ ನಗರದ ಜಿಟಿ ಮಾಲ್ ಮುಂಭಾಗದಲ್ಲಿರುವ ದಿ ಪಾರ್ಕ್ ಹೋಟೆಲ್ ಮೇಲೆ ಹಲಸೂರು ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ ಸುಮಾರು 35 ಮಂದಿಯನ್ನು ವಶಕ್ಕೆ ಪಡೆದಿದ್ದರು. ವಶಕ್ಕೆ ಪಡೆದಿದ್ದ 35 ಜನರಿಗೆ ಮೆಡಿಕಲ್ ಟೆಸ್ಟ್ ಮಾಡಿಸಲಾಗಿದ್ದು, ಅದರಲ್ಲಿ 5 ಜನ ಡ್ರಗ್ಸ್ ತೆಗೆದುಕೊಂಡಿರುವುದು ಪತ್ತೆಯಾಗಿತ್ತು. ಈ ಪಾರ್ಟಿಯಲ್ಲಿ ಬಾಲಿವುಡ್ ನಟ ಶಕ್ತಿ ಕಪೂರ್ ಅವರ ಮಗ ಹಾಗೂ ನಟಿ ಶ್ರದ್ಧಾ ಕಪೂರ್ ಅವರ ಸಹೋದರ ಸಿದ್ಧಾಂತ್ ಕಪೂರ್ ಸಹ ಸಿಕ್ಕಿ ಬಿದ್ದಿದ್ದರು. ಈ ಐವರ ವಿರುದ್ಧ ಹಲಸೂರು ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆ 20ಎ, 22ಬಿ, 27ಬಿನಡಿ ಪ್ರಕರಣ ದಾಖಲು ಮಾಡಲಾಗಿತ್ತು.