ಡ್ರಗ್ಸ್ ಪ್ರಕರಣ : ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಗೆ ಅ.9ರ ವರೆಗೆ ನ್ಯಾಯಾಂಗ ಬಂಧನ…

180
firstsuddi

ಮಂಗಳೂರು : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೊಟಿಕ್ ಪೊಲೀಸರ ವಶದಲ್ಲಿದ್ದ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಹಾಗೂ ಅಕೀಲ್ ನೌಶೀನ್‍ನನ್ನು ಅ.9ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಬಂಧಿತರನ್ನು ನಾರ್ಕೊಟಿಕ್ ಕ್ರೈಂ ಪೊಲೀಸರು ವೀಡಿಯೋ ಕಾನ್ಫರೆನ್ಸ್ ಮೂಲಕ ಮಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಇಬ್ಬರನ್ನು ಅ.9ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.