ಡ್ರಗ್ಸ್ ಮಾರಾಟ ಮಾರುತ್ತಿದ್ದ ವಿದ್ಯಾರ್ಥಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು…

57
firstsuddi

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ದಂಧೆ ಹೆಚ್ಚಳವಾಗುತ್ತಿದ್ದು, ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಕಾಲೇಜು ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಇದೀಗ ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಸಿಸಿಬಿ ಪೊಲೀಸರ ಸೆರೆಯಾಗಿದ್ದಾನೆ.

ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಯುವಕನೊಬ್ಬ ಅಕ್ರಮವಾಗಿ ಎಂಡಿಎಂಎ (ಮೆಥಿಲೆನೆ ಡಿಯಾಕ್ಸಿ ಮೆಥಾಂಫೆಟಮೈನ್) ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಎಂಡಿಎಂಎ ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಸುಳ್ಯ ಅಜ್ಜಾವರ ನಿವಾಸಿ ಪ್ರಸ್ತು ಬಿಜೈ ನಲ್ಲಿ ವಾಸವಾಗಿರುವ ಲುಕುಮಾನುಲ್ ಹಕೀಂ(22) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ಒಟ್ಟು 25 ಗ್ರಾಂ ತೂಕದ ರೂ. 1,25,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,60,000/-ಆಗಬಹುದು. ಆರೋಪಿಯ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈತನು ಮಂಗಳೂರು ನಗರದ ಕಾಲೇಜುವೊಂದರ ಪದವಿ ವಿದ್ಯಾರ್ಥಿಯಾಗಿರುತ್ತಾನೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರವರಾದ ಶ್ರೀ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿರುತ್ತಾರೆ.