ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ- ಆರೋಪಿಯ ಬಂಧನ…

58
firstsuddi

ಬೀದರ್: ಮಗಳ ಮೇಲೆ ತಂದೆಯೇ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ವ್ಯಕ್ತಿಯನ್ನು ಬಸವ ಕಲ್ಯಾಣ ಪೊಲೀಸರು ಬಂಧಿಸಿದ್ದಾರೆ.

ಮನೆಯಲ್ಲಿ ಎಲ್ಲರೂ ನಿದ್ರೆಗೆ ಜಾರಿದಾಗ ಬಲವಂತವಾಗಿ ಅತ್ಯಾಚಾರ ನಡೆಸಿ ಯಾರಿಗೂ ವಿಷಯ ಹೇಳದಂತೆ ಬಾಲಕಿಗೆ ಆರೋಪಿ ತಂದೆ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ. ಈ ಬಗ್ಗೆ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ತಿಳಿಸಿದ್ದಾರೆ.