ತಜ್ಞರ ವರದಿ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ತೀರ್ಮಾನ : ಸಚಿವ ಆರ್.ಅಶೋಕ್.

89
firstsuddi

ಬೆಂಗಳೂರು : ವಿಧಾನಸೌಧದಲ್ಲಿ ಇಂದು ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಅವರು ತಜ್ಞರ ವರದಿ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಆಧಾರದ ಮೇಲೆ ತೀರ್ಮಾನ ಮಾಡುತ್ತೇವೆ. ಕೋವಿಡ್ ಕುರಿತು ಸಚಿವರ ಸಭೆ ನಾಳೆ ಇದೆ. ಜೂನ್ 5 ಅಥವಾ 6 ರೊಳಗೆ ಸಿಎಂ ನೇತೃತ್ವದಲ್ಲಿ ಸಭೆ ನಡೆಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.