ಬೆಂಗಳೂರು : ಅತೃಪ್ತ ಶಾಸಕರು ನೀಡಿರುವ ರಾಜೀನಾಮೆಯನ್ನು ಅಂಗೀಕರಿಸುವಂತೆ ಸೂಚನೆ ನೀಡಲು ಶಾಸಕರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಮತ್ತೆ 5 ಜನ ಶಾಸಕರು ರಾಜೀನಾಮೆಯನ್ನು ಅಂಗೀಕರಿಸುವಂತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಶಾಸಕರಾದ ರೋಷನ್ ಬೇಗ್, ಕೆ. ಸುಧಾಕರ್, ಆನಂದ್ ಸಿಂಗ್, ಎಂಟಿಬಿ ನಾಗರಾಜ್ ಹಾಗೂ ಮುನಿರತ್ನ ಅವರು ನಾವು ನೀಡಿರುವ ರಾಜೀನಾಮೆ ಕ್ರಮಬದ್ಧವಾಗಿದ್ದರೂ ನಮ್ಮ ರಾಜೀನಾಮೆಯನ್ನು ಅಂಗೀಕರಿಸುತ್ತಿಲ್ಲ. ಹೀಗಾಗಿ ತಡಮಾಡದೇ ಕೂಡಲೇ ನಮ್ಮ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ಸುಪ್ರೀಂ ಕೋರ್ಟ್ಗೆ ಮನವಿ ಮಾಡಿಕೊಂಡಿದ್ದಾರೆ.










