ನವದೆಹಲಿ: ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5,000 ಕ್ಯೂಸೆಕ್ ಕಾವೇರಿ ನೀರನ್ನು ಹರಿಸುವಂತೆ ಸಿಡಬ್ಲ್ಯೂಆರ್‌ಸಿ ಕರ್ನಾಟಕಕ್ಕೆ ಸೂಚನೆ ನೀಡಿದೆ.
ಕಾವೇರಿ ಜಲ ವಿವಾದದ ಬಗ್ಗೆ ಕಾವೇರಿ ನೀರು ನಿಯಂತ್ರಣಾ ಸಮಿತಿ (ಸಿಡಬ್ಲ್ಯೂಆರ್‌ಸಿ) ಸಭೆಯನ್ನು ಮಾಡಲಾಗಿದೆ. ಈ ವೇಳೆ ವರ್ಚುವಲ್ ಮೂಲಕ ಕರ್ನಾಟಕ, ತಮಿಳುನಾಡು, ಅಧಿಕಾರಿಗಳು ಭಾಗಿಯಾಗಿದ್ದರು. ವರ್ಚುವಲ್ ಮೂಲಕ ಸಭೆ ನಡೆಸಿದ ಸಿಡಬ್ಲ್ಯೂಆರ್‌ಸಿ, ಕರ್ನಾಟಕದಿಂದ ಮುಂದಿನ 15 ದಿನಗಳ ಕಾಲ ತಲಾ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸೂಚನೆ ನೀಡಲಾಗಿದೆ. ಈ ಮೂಲಕ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿದೆ.
ಈಗಾಗಲೇ ಕಾವೇರಿ ಜಲಾಶಯದಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಜೊತೆಗೆ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸದಂತೆ ಮಂಡ್ಯ, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡಿದಾಗ್ಯೂ ಕೂಡ ಸರ್ಕಾರ ತಲಾ 5 ಸಾವಿರ ಕ್ಯೂಸೆಕ್ ನೀರನ್ನು ಹರಿಸಿತ್ತು. ಈಗ ಪುನಃ 15 ದಿನಗಳು ತಲಾ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದ್ದು, ರಾಜ್ಯದ ಕಾವೇರಿ ಕೊಳ್ಳದ ರೈತರಿಗೆ ಬರಸಿಡಿಲು ಬಡಿದಂತಾಗಿದೆ.










