ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಣ್ಣಾಮಲೈ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ: ವಿನಯ್ ಗುರೂಜಿ.

38
firstsuddi

ಚಿಕ್ಕಮಗಳೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಣ್ಣಾಮಲೈ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ ಎಂದು ಅವಧೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಜಿಲ್ಲೆಯ ಕಾರಗೃಹದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಣ್ಣಾಮಲೈ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವುದನ್ನು ನಾನು ನೋಡ್ತೀನಿ, ನೀವು ನೋಡ್ತೀರಾ. ಅಣ್ಣಾಮಲೈ ಎಸ್‌ಪಿ ಆಗಿದ್ದಾಗ ಬಂದಾಗಲೇ 2 ಸೇಬು ಕೊಟ್ಟು ಹೇಳಿದ್ದೆ. ಖಾಕಿಯಿಂದ ಖಾದಿ ಉಡ್ತಾರೆ ಎಂದು ಹೇಳಿದ್ದೆ. ಅದು ನಿಜವಾಗುತ್ತದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ.

ಮೊನ್ನೆಯಷ್ಟೆ ಅಯೋಧ್ಯೆಯಲ್ಲಿ ರಾಮನ ಪಟ್ಟಾಭಿಷೇಕ ಮುಗಿದಿದೆ. ಸದ್ಯದಲ್ಲೇ ಮೋದಿಯ ಪಟ್ಟಾಭಿಷೇಕವನ್ನೂ ಎಲ್ಲರೂ ನೋಡ್ತೀವಿ ಎಂದು ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ.