ಚೆನ್ನೈ : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರು ಸಂಪುಟದ 33 ಸದಸ್ಯರೊಂದಿಗೆ ಇಂದು ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಂ.ಕೆ ಸ್ಟಾಲಿನ್ ಅವರಿಗೆ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅಧಿಕಾರದ ಪ್ರಮಾಣ ವಚನ ಬೋಧಿಸಿದರು.
ಸ್ಟಾಲಿನ್ ಅವರು ತಮ್ಮ 69ನೇ ವಯಸ್ಸಿನಲ್ಲಿ ಮುಖ್ಯಮಂತ್ರಿ ಆಗಿದ್ದಾರೆ. ಎಂ.ಕೆ.ಸ್ಟಾಲಿನ್ ಅವರ ತಂದೆ ಎಂ.ಕರುನಾನಿಧಿ ಅವರು ಐದು ಬಾರಿ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದರು. 234 ಸದಸ್ಯರ ತಮಿಳುನಾಡು ವಿಧಾನಸಭೆಯಲ್ಲಿ ಡಿಎಂಕೆ 159 ಸ್ಥಾನಗಳಲ್ಲಿ ಗೆಲುವು ದಾಖಲಿಸಿದ್ದು, ಇದೀಗ 10 ವರ್ಷಗಳ ಬಳಿಕ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.










