ತಮಿಳುನಾಡು : ಜೂನ್ 14ರವರೆಗೆ ಲಾಕ್ ಡೌನ್ ವಿಸ್ತರಣೆ…

81
firstsuddi

ಚೆನ್ನೈ : ಕೊರೊನಾ ಏರಿಕೆಯಾಗುತ್ತಿರುವ ಹಿನ್ನಲೆ ಕೆಲವು ನಿರ್ಬಂಧಗಳ ಸಡಿಲಿಕೆಯೊಂದಿಗೆ ತಮಿಳುನಾಡಿನಲ್ಲಿ ಜೂನ್ 14ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.

ಹೊಸ ಮಾರ್ಗಸೂಚಿ ಹೊರಡಿಸಿರುವ ಎಂ.ಕೆ. ಸ್ಟಾಲಿನ್ ಸರ್ಕಾರ, ಕೋವಿಡ್ ಪ್ರಕರಣಗಳು ಕಡಿಮೆ ಇರುವ ಜಿಲ್ಲೆಗಳಲ್ಲಿ ಬೆಳಗ್ಗೆ 6 ರಿಂದ ಸಂಜೆ 5 ಗಂಟೆವರೆಗೆ ದಿನಸಿ, ಹಣ್ಣು-ತರಕಾರಿ, ಮಾಂಸ ಮಾರಾಟ ಮಳಿಗೆಗಳನ್ನು ತೆರೆಯಲು ಅವಕಾಶ ನೀಡಿದ್ದು, ಸರ್ಕಾರಿ ಕಚೇರಿಗಳಲ್ಲಿ ಶೇಕಡಾ 30 ರಷ್ಟು ಉದ್ಯೋಗಿಗಳು ಮಾತ್ರ ಕಾರ್ಯನಿರ್ವಹಿಸಬಹುದು.

ಇನ್ನೂ ಕೊರೊನಾ ಪ್ರಕರಣಗಳು ಹೆಚ್ಚಿರುವ ಕೊವೈ, ನೀಲಗಿರಿ, ತಿರುಪುರ್, ಈರೋಡ್, ಸೇಲಂ, ಕರೂರು, ನಮಕ್ಕಲ್, ತಂಜಾವೂರು, ತಿರುವರೂರ್, ನಾಗಪಟ್ಟಿನಾಮ್ ಮತ್ತು ಮಾಯಿಲಾಡುತುರೈ ಜಿಲ್ಲೆಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದ್ದು ಕೆಲವು ಚಟುವಟಿಕೆಗಳಿಗಷ್ಟೇ ಅನುಮತಿ ನೀಡಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.