ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ನೇಮಕ…

97
firstsuddi

ನವದೆಹಲಿ : ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅಣ್ಣಾಮಲೈ ಅವರನ್ನು ನೇಮಿಸಿದ್ದು, ಈ ಕುರಿತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಕಚೇರಿ ಉಸ್ತುವಾರಿಯಾದ ಅರುಣ್ ಸಿಂಗ್ ಅವರು ಆದೇಶ ಹೊರಡಿಸಿದ್ದಾರೆ. ಈ ಮೂಲಕ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರಿಗೆ ಹೊಸ ಜವಾಬ್ದಾರಿ ಬಂದಿದೆ.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಎಲ್ ಮುರುಗನ್ ಅವರು ಕೇಂದ್ರ ಸಚಿವ ಸಂಪುಟ ಸೇರಿದ ಬೆನ್ನಲ್ಲೇ ಅಣ್ಣಾಮಲೈ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಈ ಹಿಂದೆ ತಮಿಳುನಾಡು ವಿಧಾನಸಭೆಯಲ್ಲಿ ಸ್ಪರ್ಧೆ ಮಾಡಿದ್ದ ಅಣ್ಣಾಮಲೈ ಅವರು ಸೋಲನ್ನು ಅನುಭವಿಸಿದ್ದರು.