ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತ್ನಿಯನ್ನೇ ಬರ್ಬರವಾಗಿ ಕೊಂದ ಪತಿ.

80
firstsuddi

ಕಲಬುರಗಿ : ಪತಿಯೊಬ್ಬ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಂಬಿಕಾ ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.

39 ವರ್ಷದ ಫರೀದಾ ಬೇಗಂ ಕೊಲೆಯಾದ ಮಹಿಳೆ. ಜಿಲ್ಲೆಯ ಅಫಜಲಪುರ ತಾಲೂಕಿನ ಅತನೂರು ಗ್ರಾಮದಲ್ಲಿರುವ ಸರ್ಕಾರಿ ಆದರ್ಶ ಶಾಲೆಯ ಹೈಸ್ಕೂಲ್ ನಲ್ಲಿ ಹಿಂದಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಫರೀದಾ ಬೇಗಂ ಪತಿ ಎಜಾಜ್ ಅಹ್ಮದ್ ಕೂಡಾ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕ.

ಚಿಲ್ಲೆಯ ಚಿಂಚೋಳಿ ತಾಲೂಕಿನ ಚಿಮ್ಮನಚೂಡ ಗ್ರಾಮದ ನಿವಾಸಿಯಾಗಿದ್ದ ಫರೀದಾ ಬೇಗಂ 12 ವರ್ಷದ ಹಿಂದೆ ಎಜಾಜ್ ಅಹ್ಮದ್ ಜೊತೆ ವಿವಾಹವಾಗಿತ್ತು. ದಂಪತಿಗೆ ಇಬ್ಬರು ಮಕ್ಕಳು ಕೂಡಾ ಇವೆ. ಆದ್ರೆ ಕಳೆದ ಕೆಲ ವರ್ಷಗಳಿಂದ ಪತ್ನಿಯ ಶೀಲ ಶಂಕಿಸುತ್ತಿದ್ದ ಪತಿ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ. ಅಲ್ಲದೆ ಶಾಲೆಗೆ ಹೋಗದಂತೆ ಪ್ರತಿದಿನ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಸದ್ಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಎಜಾಜ್ ಅಹ್ಮದ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.