ತಲೆ ಮೇಲೆ ಕಲ್ಲು ಎತ್ತಿಹಾಕಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಬರ್ಬರ ಕೊಲೆ…

86
firstsuddi

ಬೆಳಗಾವಿ : ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಬೆನ್ನಿಗೆ ಮಾರಕಾಸ್ತ್ರದಿಂದ ಇರಿದು ಬಳಿಕ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದಿರುವ ಘಟನೆ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಶಿವಾಜಿ ನಗರ ನಿವಾಸಿ ಪ್ರಜ್ವಲ್ ಶಿವಾನಂದ ಕರಿಗಾರ (16) ಕೊಲೆಯಾದ ವಿದ್ಯಾರ್ಥಿ. ಹತ್ಯೆಗೂ ಮುನ್ನ ವಿದ್ಯಾರ್ಥಿ ನಾಪತ್ತೆಯಾಗಿರುವ ಕುರಿತು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಆತನ ಕುಟುಂಬಸ್ಥರು ದೂರು ದಾಖಲಿಸಿದ್ದರು.

ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾರೆ. ಅರೆ ಬೆತ್ತಲೆ ಸ್ಥಿತಿಯಲ್ಲಿ ಮೃತದೇಹ ಸಿಕ್ಕಿದ್ದು, ಶಾಲಾ ಸಮವಸ್ತ್ರದಿಂದ ವಿದ್ಯಾರ್ಥಿಯನ್ನು ಪತ್ತೆ ಹಚ್ಚಲಾಗಿದೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ಗಿರೀಶ್ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಸಂಬಂಧ ಬೆಳಗಾವಿ ತಾಲೂಕಿನ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.