ತಾಯಿ ಹೀರಾಬೆನ್ ಭೇಟಿಗೆ ಅಹಮದಾಬಾದ್‍ಗೆ ಆಗಮಿಸಿದ ಮೋದಿ.

43
firstsuddi

ಅಹಮದಾಬಾದ್ : ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಮೋದಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್ ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತಾಯಿ ಅನಾರೋಗ್ಯ ಹಿನ್ನೆಲೆ ಅಹಮದಾಬಾದ್‍ಗೆ ಆಗಮಿಸಿದ ಮೋದಿ, ಮೆಹ್ತಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಪ್ರಧಾನಿ ಆಗಮನದಿಂದಾಗಿ ಹೈಅಲರ್ಟ್ ಘೋಷಿಸಲಾಗಿದೆ.

ಮೋದಿ ತಾಯಿಯ ಅನಾರೋಗ್ಯದ ಸುದ್ದಿ ತಿಳಿದ ಬೆನ್ನಲ್ಲೇ ಗುಜರಾತ್ ನ ಅನೇಕ ಶಾಸಕರು ಯುಎನ್ ಮೆಹ್ತಾ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಗುಜರಾತ್ ನ ಅಹಮದಾಬಾದ್  ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ತಾಯಿ ಮತ್ತು ಮಗನ ನಡುವಿನ ಪ್ರೀತಿ ಶಾಶ್ವತ ಮತ್ತು ಅಮೂಲ್ಯವಾದುದು. ಮೋದಿ ಜೀ, ಈ ಕಷ್ಟದ ಸಮಯದಲ್ಲಿ ನನ್ನ ಪ್ರೀತಿ ಮತ್ತು ಬೆಂಬಲ ನಿಮ್ಮೊಂದಿಗಿದೆ. ನಿಮ್ಮ ತಾಯಿ ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.