ತೀರ್ಪು ಪ್ರಕಟವಾದ ಬೆನ್ನಲ್ಲೇ ಪರೀಕ್ಷೆ ಧಿಕ್ಕರಿಸಿ ಮನೆಗೆ ಹೋದ ವಿದ್ಯಾರ್ಥಿನಿಯರು.

64
firstsuddi

ಯಾದಗಿರಿ : ಹಿಜಾಬ್ ಪ್ರಕರಣ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಜಿಲ್ಲೆಯ ಕೆಂಭಾವಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆಯನ್ನೇ ಧಿಕ್ಕರಿಸಿ ಮನೆಗೆ ತೆರಳಿದ್ದಾರೆ.

ಹಿಜಬ್ ತೆಗೆಯದೆ ಬೆಳಗ್ಗೆಯಿಂದ ಕೋರ್ಟ್ ಆದೇಶಕ್ಕೆ ಕಾದು ಕುಳಿತಿದ್ದ ವಿದ್ಯಾರ್ಥಿನಿಯರು ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಹಿಜಾಬ್ ಬಿಟ್ಟು ಕ್ಲಾಸ್ ಗೆ ಬರಲ್ಲ ಎಂದು ಪೂರ್ವಭಾವಿ ಪರಿಕ್ಷೆ ಬಿಟ್ಟು ಎಂಟು ವಿದ್ಯಾರ್ಥಿಗಳು ಮನೆಗೆ ಹೋಗಿದ್ದಾರೆ.

ಇನ್ನೂ ಹೈಕೋರ್ಟ್ ನೀಡಿದ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.