ತುಟ್ಟಿಭತ್ಯೆ ಹೆಚ್ಚಳ – ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಿಸಿದ ದೇವೇಂದ್ರ.

79
firstsuddi

ಚಿಕ್ಕಮಗಳೂರು : ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಶೇ.2.75 ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಿರುವುದನ್ನು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ ಸ್ವಾಗತಿಸಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಬಾಕಿ ಉಳಿದಿದ್ದ ತುಟ್ಟಿಭತ್ಯೆಯನ್ನು ಮಂಜೂರು ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.