ತುಮಕೂರು: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು…

188
firstsuddi

ತುಮಕೂರು: ಸ್ನೇಹಿತರ ಜೊತೆ ಈಜಲು ತೆರಳಿದ್ದ ಮೂವರು ಪ್ರೌಢಶಾಲಾ ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ. ಪರಿಶಿಷ್ಟ ಜಾತಿ-ಪಂಗಡದ ಹಾಸ್ಟೆಲ್ ನಲ್ಲಿ‌ ಓದುತ್ತಿದ್ದ 9ನೇ ತರಗತಿಯ ದರ್ಶನ್(13), ಶ್ರೀನಿವಾಸ್(13) ಹಾಗೂ 8ನೇ ತರಗತಿಯ ನಂದನ್(12) ಮೃತ ದುರ್ದೈವಿಗಳು. ಗುಬ್ಬಿ ಪಟ್ಟಣದ ಕೆರೆಯಲ್ಲಿ ಒಟ್ಟು ಐವರು ಬಾಲಕರು ಈಜಲು ತೆರಳಿದ್ದರು. ಕೆರೆಯಲ್ಲಿ ಈಜುತ್ತಿದ್ದಾಗ ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಪೊಲಿಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರ ಸಹಾಯದಿಂದ ಗುಬ್ಬಿ ಪೊಲೀಸರು ಬಾಲಕರ ಮೃತದೇಹಗಳನ್ನು ಹೊರತೆಗೆದಿದ್ದಾರೆ.