ತೌಕ್ತೆ ಚಂಡಮಾರುತ : ಇಂದು-ನಾಳೆ ಕರ್ನಾಟಕದ ಹಲವೆಡೆ ಭಾರೀ ಮಳೆ ಸಾಧ್ಯತೆ…

173
firstsuddi

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ತೌಕ್ತೆ ಚಂಡಮಾರುತ ಉದ್ಭವಿಸಿದ್ದು, ಇಂದು ಮತ್ತು ನಾಳೆ ಕರಾವಳಿ, ಮಲೆನಾಡು ಸೇರಿದಂತೆ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಕಾರಣ ಮೀನುಗಾರರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ನೀಡಿದೆ. ಇತ್ತ ಕೊಡಗಿನಲ್ಲೂ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಇಂದು 64 ಮಿ.ಮೀ ಹಾಗು ನಾಳೆ 115 ಮಿ.ಮೀ ಗಿಂತ ಹೆಚ್ಚು ಮಳೆಯಾಗಲಿದೆ. ಹೀಗಾಗಿ ಇಂದು ಎಲ್ಲೋ ಅಲರ್ಟ್, ನಾಳೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ತಗ್ಗು ಪ್ರದೇಶ, ಬೆಟ್ಟಗುಡ್ಡಗಳಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ತಿಳಿಸಿದೆ.