ತ್ರಿಪುರಾ ಮಾಜಿ ಸಿಎಂ ಪೂರ್ವಜರ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು…

42
firstsuddi

ಅಗರ್ತಲಾ : ತ್ರಿಪುರಾದ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರ ತ್ರಿಪುರಾದ ಗೋಮತಿ ಜಿಲ್ಲೆಯ ಜಮ್ಜುರಿ ಗ್ರಾಮದಲ್ಲಿರುವ ಪೂರ್ವಜರ ಮನೆಗೆ ದುಷ್ಕರ್ಮಿಗಳು ದಾಳಿ ನಡೆಸಿ ಬಳಿಕ ಬೆಂಕಿ ಹಚ್ಚಿದ್ದಾರೆ. ನಿವಾಸದ ಬಳಿಯಿದ್ದ ಕಾರು ಹಾಗೂ ಇತರ ವಾಹನಗಳನ್ನೂ ಧ್ವಂಸಗೊಳಿಸಿದ್ದಾರೆ.

ವರದಿಗಳ ಪ್ರಕಾರ, ದೇಬ್ ಅವರ ಸಂಬಂಧಿಕರು ತಮ್ಮ ತಂದೆ ಹಿರುಧನ್ ದೇಬ್ ಅವರ ವಾರ್ಷಿಕ ವಿಧಿ ವಿಧಾನಗಳ ವ್ಯವಸ್ಥೆ ಮಾಡಲು ಪೂರ್ವಜರ ಮನೆಗಾಗಮಿಸಿದ್ದರು. ಎಲ್ಲರೂ ತಮ್ಮ ಕೆಲಸಗಳಲ್ಲಿ ನಿರತರಾಗಿದ್ದಾಗ ದುಷ್ಕರ್ಮಿಗಳ ತಂಡ ಮನೆ ಮೇಲೆ ದಾಳಿ ನಡೆಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ದಾಳಿ ನಡೆಸಿರುವ ಕಿಡಿಗೇಡಿಗಳಿಗೆ ಪ್ರತಿಪಕ್ಷ ಸಿಪಿಐಎಂ ಬೆಂಬಲಿಸಿದೆ ಎಂದು ಆರೋಪಿಸಲಾಗಿದೆ. ಸಿಪಿಐಎಂ ಶಾಸಕ ರತನ್ ಭೌಮಿಕ್ ಅವರು ಅದೇ ಗ್ರಾಮದಲ್ಲಿ ಸಂಘಟನಾ ಸಭೆ ನಡೆಸಿದ ಬೆನ್ನಲ್ಲೇ ಈ ದಾಳಿ ನಡೆದಿದೆ. ಈ ಘಟನೆ ಕುರಿತು ತನಿಖೆ ಮುಂದುವರೆದಿದೆ.