ದಕ್ಷಿಣ ಕನ್ನಡ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ನಡೆದ ಉಪಚುನಾವಣೆಯ ಮತಗಳ ಎಣಿಕೆ ಇಂದು ಪ್ರಾರಂಭ.

31

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ಇ ಹಿಂದೆ ನಡೆಯಲಾಗಿದ್ದ ಉಪಚುನಾವಣೆಯ ಮತಗಳ ಎಣಿಕೆ ಇಂದು ಮಂಗಳೂರು ನಗರದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭವಾಗಿದೆ. ಮತ ಎಣಿಕೆಗೆಂದು ಪ್ರತ್ಯೇಕ ಕೊಟಡಿಯನ್ನು ಆಯೋಜಿಸಲಾಗಿದೆ, ಮತ ಎಣಿಕೆಯು 12 ಮೇಜುಗಳಲ್ಲಿ ನಡೆಯುತ್ತಿದೆ. ಪ್ರತಿ ಮೇಜಿಗೆ ಒಬ್ಬ ಮತ ಎಣಿಕಾ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಹಾಗೂ ಒಬ್ಬರು ‘ಡಿ’ ಗ್ರೂಪ್ ಸಿಬ್ಬಂದಿ ಇದ್ದಾರೆ. ಒಟ್ಟು 392 ಮತ ಪೆಟ್ಟಿಗೆಗಳಿದ್ದು ಪ್ರತಿ ಮೇಜಿಗೆ ತಲಾ 33 ಮತಪೆಟ್ಟಿಗೆಯಂತೆ ಹಂಚಿಕೆ ಮಾಡಲಾಗಿದೆ.
ಮತ ಎನಿಕೆ ಪ್ರಾರಂಭಿಕ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಅವುಗಳ ಮಿಶ್ರಣ ಕಾರ್ಯ ನಡೆಯುತ್ತದೆ. ಮತ ಎಣಿಕೆ ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಗುತ್ತದೆ. ನಿಗದಿತ ಕೋಟಾವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಘೋಷಿಸಲಾಗುತ್ತದೆ. ಸೋಮವಾರ ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.