ಹೆಬ್ಬಾಳೆ ಸೇತುವೆ ಮುಳುಗಡೆ, ಬೆಳ್ತಂಗಡಿ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ…

147
firstsuddi

ಚಿಕ್ಕಮಗಳೂರು/ಮಂಗಳೂರು : ಚಿಕ್ಕಮಗಳೂರಿನ ಕುದುರೆಮುಖ ಸುತ್ತಮುತ್ತ ಇಡೀ ರಾತ್ರಿ ಮಳೆಯಾಗಿದ್ದು, ಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ಗು, ಕಳಸ- ಹೊರನಾಡು ದೇವಸ್ಥಾನ ಸಂಪರ್ಕ ಕಡಿತವಾಗಿದೆ. ಸೇತುವೆ ಮೇಲೆ ಎರಡು ಅಡಿ ನೀರು ಹರಿಯುತ್ತಿದೆ. ಪ್ರತಿ ಮಳೆಗಾಲದಲ್ಲಿಯೂ ಹೆಬ್ಬಾಳೆ ಸೇತುವೆ ಮುಳಗಡೆ ಆಗುತ್ತದೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಹೀಗಾಗಿ ಬೆಳ್ತಂಗಡಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ರಜೆ ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಮಾತ್ರ ರಜೆ ಘೋಷಣೆ ಮಾಡಲಾಗಿದ್ದು, ಇನ್ನುಳಿದ ಎಲ್ಲಾ ತಾಲೂಕಿನಲ್ಲೂ ಶಾಲಾ ಕಾಲೇಜು ಎಂದಿನಂತೆ ನಡೆಯಲಿದೆ.

ಜೂನ್ 29 ಹಾಗೂ 30ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಿತ್ತು. ಈ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ನಿನ್ನೆ ರಾತ್ರಿಯಿಂದ ಮತ್ತೆ ವರುಣನ ಆರ್ಭಟ ಜೋರಾಗಿದೆ. ಹವಾಮಾನ ಇಲಾಖೆಯು ಇಂದಿನಿಂದ ಜುಲೈ 7ವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ.