ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರಿಗೆ ವಾಟ್ಸಾಪ್ ಗ್ರೂಪ್‍ನಲ್ಲಿ ಕೊಲೆ ಬೆದರಿಕೆ…

211
firstsuddi

ಮಂಗಳೂರು : ಅಕ್ರಮವಾಗಿ ಗೋಸಾಗಾಟ ಮಾಡುವ ವೇಳೆ ವ್ಯಾಪಾರಿಗಳಿಗೆ ಹಲ್ಲೆ ಮಾಡದೆ ಪೊಲೀಸರಿಗೆ ಒಪ್ಪಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಸೂಚನೆ ನೀಡಿದ ಬೆನ್ನಲ್ಲೇ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ.
ನಿನ್ನೆ ತಮ್ಮ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಅಕ್ರಮವಾಗಿ ಅಥವಾ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಾಣಿಕೆ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳದೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಸಾರ್ವಜನಿಕರು ಕಾನೂನು ಉಲ್ಲಂಘಿಸಿ ಜಾನುವಾರು ಸಾಗಾಣಿಕೆ ಮಾಡುವ ವಾಹನ ಅಥವಾ ಜನರ ಮೇಲೆ ಹಲ್ಲೆ ನಡೆಸಿದ್ದಲ್ಲಿ ಕಾನೂನು ರೀತಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದರು. ಈ ವಿಚಾರವಾಗಿ ಮಾಧ್ಯಮಗಳಲ್ಲಿ ಸುದ್ದಿಗಳು ವರದಿಯಾದ ಬೆನ್ನಲ್ಲೇ ವಾಟ್ಸಾಪ್ ಗ್ರೂಪ್ ಒಂದರಲ್ಲಿ ತುಳು ಭಾಷೆಯಲ್ಲಿ ಮೊದಲು ಜಿಲ್ಲಾಧಿಕಾರಿಯನ್ನು ಕೊಲೆ ಮಾಡಬೇಕು ಎಂದು ಪೋಸ್ಟ್ ಹಾಕಿದ್ದು, ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.