ದರ್ಶನ್ ಮಧ್ಯಂತರ ಜಾಮೀನು ಅರ್ಜಿ ಭವಿಷ್ಯ ನಾಳೆ ನಿರ್ಧಾರ! ಆದೇಶ ಕಾಯ್ದಿರಿಸಿದ ಹೈಕೋರ್ಟ್.

31

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಾಧೀಶರು ಆದೇಶ ಕಾಯ್ದಿರಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ಆದರೆ ಅವರಿಗೆ ಇತ್ತೀಚೆಗೆ ತೀವ್ರತರವಾದ ಬೆನ್ನು ನೋವಿನ ಸಮಸ್ಯೆ ಕಂಡು ಬಂದಿದೆ. ಬೆನ್ನುಮೂಳೆ ನೋವಿನಿಂದ ಬಳಲುತ್ತಿರುವ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಬೇಕು ಎಂದು ದರ್ಶನ್ ಪರ ವಕೀಲರಾದ ಸಿ.ವಿ.ನಾಗೇಶ್ ಅವರು ನ್ಯಾಯಾಧೀಶರ ಮುಂದೆ ಮನವಿ ಮಾಡಿದ್ದಾರೆ.
ದರ್ಶನ್ ಅವರು 2022-23 ರಲ್ಲೂ ಈ ಬೆನ್ನು ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರಿಗೆ ಇದ್ದ ಅನಾರೋಗ್ಯಕ್ಕಿಂತ ಹೆಚ್ಚಿನ ಸಮಸ್ಯೆ ದರ್ಶನ್‍ಗೆ ಇದೆ. ಚೆನ್ನುಹುರಿ ಸಮಸ್ಯೆಯಿಂದ ಕಾಲು ಮರಗಟ್ಟುವಿಕೆ ಆಗುತ್ತದೆ. ಇದು ಮುಂದುವರಿದರೆ ಮತ್ತಷ್ಟು ಸಮಸ್ಯೆ ಬೆನ್ನುಮೂಳೆ ಸಮಸ್ಯೆಯಿಂದ ದರ್ಶನ್ ಅವರಿಗೆ ರಕ್ತ ಪರಿಚಲನೆ ಆಗುತ್ತಿಲ್ಲ. ಹೀಗಾಗಿ ಸರ್ಜರಿ ನಡೆಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಜಾಮೀನು ಕೊಡಬೇಕು ಎಂದು ಮನವಿ ಮಾಡಿದರು. ಎಸ್‍ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿ, ವೈದ್ಯರ ವರದಿಯನ್ನು ಓದಿ ಎಷ್ಟು ದಿನ ಚಿಕಿತ್ಸೆ ಬೇಕು? ಎಷ್ಟು ದಿನಗಳಲ್ಲಿ ಗುಣಮುಖರಾಗುತ್ತಾರೆ ಎಂಬುವುದು ವೈದ್ಯಕೀಯ ವರದಿಯಲ್ಲಿ ಇಲ್ಲ ಎಂದು ವಾದಿಸಿದರು. ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿ ಮಧ್ಯಂತರ ಜಮೀನು ನೀಡುವಂತೆ ಮನವಿ ಮಾಡಿದರು. ದರ್ಶನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಈ ಕಾರಣಕ್ಕಾಗಿ ಅವರಿಗೆ ಜಾಮೀನು ಕೊಡಬೇಕು. ದರ್ಶನ್ ಬೆನ್ನುಮೂಳೆ ಸಮಸ್ಯೆಗಾಗಿ ಚಿಕತ್ಸೆಯನ್ನು ನೀಡಬೇಕಿದೆ. ಅವರಿಗೆ ನಡೆಯಲು ಸಾಧ್ಯವಾಗುತ್ತಿಲ್ಲ. ವೈದ್ಯಕೀಯ ಆಧಾರದಲ್ಲಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು. ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಾಧೀಶರು ಆದೇಶವನ್ನು ನಾಳೆಗೆ ಕಾಯ್ದಿರಿಸಿದ್ದಾರೆ