ಚಿಕ್ಕಮಗಳೂರು : ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಠಾಣೆಯಲ್ಲಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ ಸ್ಪೆಕ್ಟರ್ ಅರ್ಜುನ್ ಗೆ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಬೆಂಗಳೂರಿನಲ್ಲಿ ಪಿಎಸ್ಐ ಅರ್ಜುನ್ ನನ್ನ ಬಂಧಿಸಿದ ಸಿ.ಐ.ಡಿ. ಪೊಲೀಸರು ಇಂದು ಚಿಕ್ಕಮಗಳೂರು ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶೆ ಪುಷ್ಪಾಂಜಲಿ ಅವರು ಆರೋಪಿ ಅರ್ಜುನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.










