ಮೂಡಿಗೆರೆ: ತಾಲ್ಲೂಕಿನ ದಾರದಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಡಿ. ಜಿ. ರಂಜಿತ್ ಹಾಗೂ ಉಪಾಧ್ಯಕ್ಷರಾಗಿ ಧಾರ್ಮಿಕ ದಿನೇಶ್ ಅವರು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ರಂಜಿತ್ ಡಿ.ಜಿ. ಅವರು ಮಾತನಾಡಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ತಮ್ಮನ್ನು ಆಯ್ಕೆ ಮಾಡಿದ ಎಲ್ಲಾ ನಿರ್ದೇಶಕರು ಹಾಗೂ ಮುಖಂಡರಿಗೆ ಧನ್ಯವಾದಗಳನ್ನು ಸಲ್ಲಿಸಿದರು. ತಮ್ಮ ಅವಧಿಯಲ್ಲಿ ಸಹಕಾರ ಕ್ಷೇತ್ರದಲ್ಲಿ ರೈತರಿಗೆ ನ್ಯಾಯ ಒದಗಿಸಲು ಶ್ರಮಿಸುವುದಾಗಿ ಅವರು ತಿಳಿಸಿದರು. ಕೃಷಿ ಸಹಕಾರ ಸಂಘವನ್ನು ಅಭಿವೃದ್ಧಿಪಡಿಸಿ, ಸರ್ಕಾರದಿಂದ ಬರುವ ಸವಲತ್ತುಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಜವಾಬ್ದಾರಿಯನ್ನು ನಿರ್ವಹಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳಾದ ರಂಜನ್ ಅಜಿತ್ ಕುಮಾರ್, ದೀಪಕ್ ಕಡಿದಾಳು, ರವಿ ಹಾಲೂರು, ಸಿದ್ದೇಶ್ ಕೆಸವಳಲು, ಆನಂದ್ ಆಚಾರಿ ಹಂಡಗುಳಿ, ಸುನೀತಾ ಕೆಸವಳಲು, ಕೆ. ಎಸ್. ರಂಜಿತ್ ಕೆಸವಳಲು, ವಿಕ್ರಂ ದಾರದಹಳ್ಳಿ, ಸೀನಾ ಮಗ್ಗಲಮಕ್ಕಿ, ಅರುಣಕ್ಷಮ್ಮ ಅಬಚೂರು ಸೇರಿದಂತೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಪತ್ ಕುಮಾರ್, ಸಿಬ್ಬಂದಿಗಳಾದ ಸ್ಮಿತಾ, ವಿಘ್ನೇಶ್, ಶ್ರೀಮಂತ್, ಆನಂದ್, ಅಶ್ವಥ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.










