ಬೆಂಗಳೂರು : ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಇಂದು ಬೆಳಗ್ಗೆ ಒಂಬತ್ತು ಗಂಟೆಗೆ ದಾವೋಸ್ನಿಂದ ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ, ಕೊನೆ ಕ್ಷಣದಲ್ಲಿ ಪ್ರವಾಸ ಮುಂದೂಡಿಕೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.
ಬೊಮ್ಮಾಯಿ ಅವರು, ತಮ್ಮ ಪ್ರವಾಸವನ್ನು ಒಂದು ದಿನ ವಿಸ್ತರಣೆ ಮಾಡಿದ್ದು, ಶುಕ್ರವಾರ(ನಾಳೆ)ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಇಚ್ಚಿಸಿರುವ ಉದ್ಯಮಿಗಳ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಿಗದಿಯಾದ ಹಿನ್ನೆಲೆಯಲ್ಲಿ ಪ್ರವಾಸ ಮುಂದೂಡಿ ಸಭೆಯಲ್ಲಿ ಭಾಗಿಯಾಗುತ್ತಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಸಚಿವರಾದ ಮುರುಗೇಶ್ ನಿರಾಣಿ, ಡಾ.ಅಶ್ವತ್ಥ್ ನಾರಾಯಣ್ ಕೂಡ ಉಪಸ್ಥಿತರಿದ್ದಾರೆ.










