ನವದೆಹಲಿ : ಮಾಜಿ WWE ಸ್ಟಾರ್, ಖ್ಯಾತ ‘ದಿ ಗ್ರೇಟ್ ಖಲಿ’ ದಲೀಪ್ ಸಿಂಗ್ ರಾಣಾ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಇಂದು ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಮುಖಂಡರ ಸಮ್ಮುಖದಲ್ಲಿ ಖಲಿ ಅವರು ಪಕ್ಷಕ್ಕೆ ಸೇರಿದ್ದಾರೆ. ಬಿಜೆಪಿ ಸೇರಿದ್ದಕ್ಕೆ ಖುಷಿಯಾಗಿದೆ. ಪ್ರಧಾನಿ ಮೋದಿಯವರು ದೇಶಕ್ಕಾಗಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ರಾಷ್ಟ್ರದ ಅಭಿವೃದ್ಧಿಗಾಗಿ ಅವರ ಆಡಳಿತದ ಭಾಗವಾಗವಾಗಬೇಕೆಂದು ಆಸೆ ಇಟ್ಟುಕೊಂಡಿದ್ದೆ. ಹಾಗಾಗಿ ಬಿಜೆಪಿ ಪಕ್ಷ ಸೇರಿದ್ದೇನೆ ಎಂದು ಖಲಿ ಹೇಳಿದ್ದಾರೆ.
ಫೆಬ್ರವರಿ 14 ರಂದು ಪಂಜಾಬ್ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.










