‘ದಿ ವ್ಯಾಕ್ಸಿನ್ ವಾರ್’ ಸಿನಿಮಾದ ಚಿತ್ರೀಕರಣದ ಶೂಟಿಂಗ್ ವೇಳೆ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಪತ್ನಿ ಹಾಗೂ ನಟಿ ಪಲ್ಲವಿ ಜೋಶಿ ಗಾಯಗೊಂಡಿದ್ದಾರೆ.
ವಿವೇಕ್ ಅಗ್ನಿಹೋತ್ರಿಯವರ ಬಹುನಿರೀಕ್ಷಿತ ಸಿನಿಮಾ ‘ದಿ ವ್ಯಾಕ್ಸಿನ್ ವಾರ್’ ಚಿತ್ರೀಕರಣವನ್ನು ಲಖೌನ್ ನಲ್ಲಿ ಮುಗಿಸಿ, ಚಿತ್ರತಂಡ ಮುಂದಿನ ಶೂಟಿಂಗ್ ಗಾಗಿ ಹೈದರಾಬಾದ್‍ಗೆ ಆಗಮಿಸಿತ್ತು. ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿರುವ ಪಲ್ಲವಿ ಜೋಶಿ ಅವರು ಚಿತ್ರೀಕರಣಕ್ಕೆ ಬಂದಾಗ, ಕಾರು ಅಪಘಾತವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆತಂಕ ಪಡುವಂತಹದ್ದು ಏನೂ ಆಗಿಲ್ಲವಾದರೂ, ಚಿತ್ರೀಕರಣವನ್ನು ನಿಲ್ಲಿಸಿದ್ದಾರಂತೆ ವಿವೇಕ್.
ಸೂಪರ್ ಹಿಟ್ ‘ಕಾಂತಾರ’ ಸಿನಿಮಾದಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿದ್ದ ಸಪ್ತಮಿ ಗೌಡ ಇದೀಗ ‘ದಿ ವ್ಯಾಕ್ಸಿನ್ ವಾರ್’ ಚಿತ್ರದ ಮೂಲಕ ಬಾಲಿವುಡ್ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಈ ಚಿತ್ರದಲ್ಲಿ ಸಪ್ತಮಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
2020 ಹಾಗೂ 2021ರಲ್ಲಿ ಭಾರತ ಕೊವಿಡ್ ವಿರುದ್ಧ ಹೋರಾಡಿದೆ. ಕೊರೊನಾ ಲಸಿಕೆ ಉತ್ಪಾದನೆಯಲ್ಲಿ ಭಾರತ ಮಹತ್ವದ ಪಾತ್ರವಹಿಸಿತ್ತು. ಇದನ್ನು ಮುಖ್ಯವಾಗಿಟ್ಟುಕೊಂಡು ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಸಿದ್ಧಗೊಳ್ಳುತ್ತಿದೆ.










